Site icon PowerTV

ದಸರಾ ಉತ್ಸವಕ್ಕೆ ಹಂಸಲೇಖರಿಂದ ನಾಳೆ ಚಾಲನೆ

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರೆಯಲಿದೆ.

ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಪ್ರೊ.ಭಗವಾನ್ ಬಂಧನಕ್ಕೆ ಆಗ್ರಹ : ಶಾಸಕ ಅಶ್ವತ್ಥ್​ನಾರಾಯಣ

ಬಳಿಕ ಚಾಮುಂಡಿ ಬೆಟ್ಟದಲ್ಲೇ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಉತ್ಸವಕ್ಕೆ ಕ್ಷಣಗಣನೆ ಬಾಕಿಯಿದ್ದು, ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Exit mobile version