Thursday, August 28, 2025
HomeUncategorizedಅಂಬೇಡ್ಕರ್ ಆಶಯದಂತೆ ನಮ್ಮ ಸರ್ಕಾರ ಸಾಗುತ್ತಿದೆ : ಸಿದ್ದರಾಮಯ್ಯ

ಅಂಬೇಡ್ಕರ್ ಆಶಯದಂತೆ ನಮ್ಮ ಸರ್ಕಾರ ಸಾಗುತ್ತಿದೆ : ಸಿದ್ದರಾಮಯ್ಯ

ಮೈಸೂರು : ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರರಬೇಕು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಅವರ ಆಶಯಗಳ ಹಾದಿಯಲ್ಲಿ ನಮ್ಮ‌ ಸರ್ಕಾರ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು ಎಂದು ತಿಳಿಸಿದರು.

ನಮ್ಮ ಜನ ಪ್ರೀತಿ ಹಂಚುವವರು

ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

ತೀವ್ರ ಬರಗಾಲದ ಸ್ಥಿತಿ ಇದೆ

ರಾಜ್ಯದ 216 ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲದ ಸ್ಥಿತಿ ಇದೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ಧೂರಿಯಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ. ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ. ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments