Site icon PowerTV

ದುಡುಕಿದ ತಾಯಿ..! 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ಆತ್ಮಹತ್ಯೆ

ದಾವಣಗೆರೆ : 5 ವರ್ಷದ ಮಗುವಿನೊಂದಿಗೆ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿಯ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಹೊನ್ನೆಬಾಗಿ ಗ್ರಾಮದ ಕವಿತಾ(27), ಪುತ್ರಿ ನಿಹಾರಿಕಾ(5) ಮೃತ ದುರ್ದೈವಿಗಳು. ಪತಿ ಮಂಜುನಾಥ್​ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಶುಕ್ರವಾರದಿಂದ ಕವಿತಾ ಹಾಗೂ ಪುತ್ರಿ ನಿಹಾರಿಕ ಕಾಣೆಯಾಗಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಪತಿ ಮಂಜುನಾಥ್ ನಿಂದ ನಿರಂತರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸವಾರ ಸಾವು

ಗೂಡ್ಸ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ತಿ.ನರಸೀಪುರದ ಸೋಸಲೆ ಸಮೀಪ ನಡೆದಿದೆ. ಕನಕಪುರ ತಾಲೂಕು ಬಿಜ್ಜಳ್ಳಿ ಗ್ರಾಮದ ಬಿ.ಪಿ.ಪ್ರಭುಸ್ವಾಮಿ ಎಂಬುವರ ಪುತ್ರ 42 ವರ್ಷದ ಪುಟ್ಟ ಸಿದ್ದಯ್ಯ ಮೃತ ದುರ್ದೈವಿ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version