Site icon PowerTV

ದೇವೇಗೌಡ, ಸೋಮನಾಥ್​ಗೆ ಗೌರವ ಡಾಕ್ಟರೇಟ್

ಬೆಂಗಳೂರು : ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಹಾಗೂ ಚಂದ್ರಯಾನ-3 ಯಶಸ್ಸಿನ ರೂವಾರಿ ಇಸ್ರೋ ಅಧ್ಯಕ್ಷ ಎಸ್​. ಸೋಮನಾಥ್​ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಘೋಷಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿವಿ ಕುಲಪತಿ ಜಯಕರ ಶೆಟ್ಟಿ ಅವರು, ಅಕ್ಟೋಬರ್ 17 (ನಾಳೆ) ರಂದು ನಡೆಯಲಿರುವ ಬೆಂಗಳೂರು ವಿವಿಯ 58ನೇ ವಾರ್ಷಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಇನ್ನೂ ವಾರ್ಷಿಕೋತ್ಸವದಲ್ಲಿ 28,871 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದು, ಸ್ನಾತಕ ಪದವಿಯಲ್ಲಿ 104 ಹಾಗೂ ಸ್ನಾತಕೋತ್ತರ ಪದವಿಯಲ್ಲಿ 195 ವಿದ್ಯಾರ್ಥಿಗಳಿಗೆ ಸೇರಿ ಒಟ್ಟು 299 ಚಿನ್ನದ ಪದಕ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Exit mobile version