Site icon PowerTV

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

ಹಾಸನ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ.

ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ಸಿಗದೆ ಮನೆಯೊಂದಕ್ಕೆ ನುಗ್ಗಿದೆ. ಅಪಘಾತದಿಂದಾಗಿ ಮನೆ ಜಖಂ ಆಗಿದೆ. 4-5 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾಹುತ ತಪ್ಪಿದೆ.

ಇದನ್ನು ಓದಿ: ಹಾಡುಹಗಲೇ ಕುರಿ ಕಳ್ಳತನ: ಕಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು!

ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಹಾಗೂ ಕಾಂಪೌಂಡ್ ನೆಲಕ್ಕುರುಳಿವೆ. ಬಸ್ ಹಾಗೂ ವಾಸದ ನಿವಾಸಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಅರಸೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Exit mobile version