Site icon PowerTV

ಮುಸ್ಲಿಂ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸಿಲ್ಲ : ಹೆಚ್.ಡಿ. ದೇವೇಗೌಡ

ಬೆಂಗಳೂರು : ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್​.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಘಟಕಗಳ ಜೊತೆ ಚರ್ಚಿಸಿ ಒಂದು ನಿರ್ಣಯ ಮಾಡಿದ್ದೇವೆ. ಪಕ್ಷದ ನಿಯಮಾವಳಿ ಕೂಡ ಇದೆ. ಇಬ್ರಾಹಿಂ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ ಎಂದು ತಿಳಿಸಿದರು.

ನಾವು ಬಿಜೆಪಿ ಜೊತೆ ಹೋಗುವ ಸನ್ನಿವೇಶ ಸೃಷ್ಟಿಸಿದ್ದು ಯಾರು? ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ. ಲೋಕಸಭಾ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ. ಇದರಿಂದ ಜೆಡಿಎಸ್​ ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ದೇವೇಗೌಡ ಹೇಳಿದರು.

Exit mobile version