Site icon PowerTV

ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ? : ಮುನಿರತ್ನ ಪ್ರಶ್ನೆ

ಬೆಂಗಳೂರು : ಆರ್.ಆರ್ ನಗರ ಕ್ಷೇತ್ರಕ್ಕೆ ನೀಡಿದ್ದ 126 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವ ಪ್ರಕರಣದ ಬಗ್ಗೆ‌ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡಲಾಗಿದೆ. ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಅವರು ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಮಗಾರಿಗಳ ಪಟ್ಟಿ ಕೇಳಿದ್ರು, ಅವರು ಕೇಳಿದ ವಿವರ ಸಲ್ಲಿಸಿದ್ದೇನೆ. ನನಗೆ ನಂಬಿಕೆ ಇದೆ, ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ. ಅವರು ಅನುದಾನ ಕೊಡದಿದ್ರೆ ಮುಂದೇನು ಮಾಡಬೇಕೆಂದು ತಿಳಿಸುತ್ತೇನೆ. ಅನುದಾನ ವಾಪಸ್ ಬರದಿದ್ರೆ ಮತ್ತೆ ಪ್ರತಿಭಟನೆ ಮಾಡಲ್ಲ, ಕಾಲು ಹಿಡಿಯಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮುಕ್ತಾಯ ಆಗುತ್ತೆ

ಬೆಳಗಾವಿ ಬಣ ರಾಜಕೀಯ ಭುಗಿಲು ವಿಚಾರಕ್ಕೆ ಪ್ರತಿಕ್ರಿಯಿಸಿದ ಮುನಿರತ್ನ ಅವರು, ಬೆಳಗಾವಿಯಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಈ ಮೊದಲು ಸಮ್ಮಿಶ್ರ ಸರ್ಕಾರ ಉರುಳಿದ್ದೇ ಬೆಳಗಾವಿ ರಾಜಕಾರಣದಿಂದ, ಬೆಳಗಾವಿಯಲ್ಲಿ ರಾಜಕಾರಣ ಶುರುವಾದಾಗಲೆಲ್ಲ ಸರ್ಕಾರಗಳಿಗೆ ಗಂಡಾಂತರ ಬರುತ್ತೆ, ಬೆಳಗಾವಿಯಲ್ಲಿ ಶುರುವಾಗಿ ಬೆಂಗಳೂರಿನಲ್ಲಿ ಮುಕ್ತಾಯ ಆಗುತ್ತೆ ಎಂದು ತಿಳಿಸಿದ್ದಾರೆ.

Exit mobile version