Site icon PowerTV

ಉಯ್ಯಾಲೆಯಾಡುತ್ತಿದ್ದ ಶಿಕ್ಷಕಿ ಮಹಡಿಯಿಂದ ಬಿದ್ದು ಸಾವು

ಚಾಮರಾಜನಗರ: ಎರಡು ಅಂತಸ್ತಿನ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಗುರುವಾರ ಮೃತಪಟ್ಟಿದ್ದಾರೆ.

ಚಾಮರಾಜನಗರದ ಜೆ.ಪಿ ಮಲ್ಲಪ್ಪ ಪುರಂ ಬಡಾವಣೆಯ ನಿವಾಸಿ ಶಿಕ್ಷಕಿ ಕೆ.ಪುಟ್ಟಿ ಮೃತರು.ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಬಿದ್ದ ತಕ್ಷಣ ಮನೆಯವರು ಅವರನ್ನು ಮೇಲೆತ್ತಿ ನಗರದ ಸರ್ಕಾರಿ ಉಪ ವಿಭಾಗ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?

ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿ ಸಂಘದ ತಾಲ್ಲೂಕು ಅಧ್ಯಕ್ಷರು ಆಗಿದ್ದರು ಎಂದು ತಿಳಿದುಬಂದಿದೆ.

Exit mobile version