Site icon PowerTV

ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ : ವಿಜಯಪುರದ BLDE ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ವಿಜಯಪುರದ BLDE ಸಂಸ್ಥೆಯ ಸಭಾಂಗಣದಲ್ಲಿ ಘಟಿಕೋತ್ಸವ ನಡೀತು. ದಾವಣಗೆರೆಯ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿರೋದು ವಿಶೇಷವಾಗಿತ್ತು. 93ನೇ ಇಳಿವಯಸ್ಸಿನಲ್ಲಿ ಶಾಮನೂರು ಶಿವಶಂಕರಪ್ಪ ವೇದಿಕೆ ಮೇಲೆ ಎಲ್ಲರಂತೆ ಭಾಗಿಯಾಗಿದ್ದರು.

ಇನ್ನೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ, ಬಂಗಾರ ಪದಕ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮಾತನಾಡಿದರು.

ನನಗೆ ಮೂರು ಡಾಕ್ಟರೇಟ್ ದೊರಕಿದೆ

ನನ್ನ ಪರಿಚಯ ಮಾಡುವಾಗ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ನಾನು ಏಳು ಬಾರಿ ಶಾಸಕ, ಒಂದು ಬಾರಿ ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ. ಈಗಾಗಲೇ ನನಗೆ ಮೂರು ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ದೊರಕಿದ್ದು, ಇದು ನಾಲ್ಕನೇಯ ಗೌರವವಾಗಿದೆ. ಇದಕ್ಕೆಲ ನಾವು ಮಾಡುವ ಒಳ್ಳೆಯ ಕೆಲಸಗಳೇ ಕಾರಣ ಎಂದು ಹೇಳಿದರು.

Exit mobile version