Site icon PowerTV

ಪಾಕ್-ಆಸಿಸ್ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದರು.

ಹೌದು, ರಾಜಕೀಯ ಒತ್ತಡದ ನಡುವೆಯೂ ಪಂದ್ಯ ವೀಕ್ಷಿಸುವ ಮೂಲಕ ತಾನೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ವೀಕ್ಷಿಸಲು ಸಿದ್ದರಾಮಯ್ಯ ಅವರು ತಮ್ಮ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪಂದ್ಯ ವೀಕ್ಷಿಸಿ ಎಂಜಾಯ್ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಪಂದ್ಯ ವೀಕ್ಷಣೆ ಮಾಡಲು ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸುತ್ತಾ ಸಿಎಂ ಪಂದ್ಯ ವೀಕ್ಷಿಸಿದರು. ಆಸ್ಟ್ರೇಲಿಯಾ ನೀಡಿರುವ 368 ರನ್​ಗಳ ಬೃಹತ್ ಟಾರ್ಗೆಟ್​ ಬೆನ್ನತ್ತಿರುವ ಪಾಕಿಸ್ತಾನ ತಂಡ ಪ್ರಸ್ತುತ 26.2 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 175 ರನ್​ ಗಳಿಸಿದೆ. ಪಾಕ್​ ಗೆಲುವಿಗೆ ಇನ್ನೂ 193 ರನ್​ ಬೇಕಿದೆ.

Exit mobile version