Site icon PowerTV

ವಿವಿಧ ಬೇಡಿಕೆ ಈಡೇರಿಸುವಂತೆ ಶಿಕ್ಷಕರ ಸಂಘದಿಂದ ಪ್ರತಿಭಟನೆ!

ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ‌ ಶಿಕ್ಷಕರ ಸಂಘದಿಂದ ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡಲಾಗಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿದ್ದಾರೆ.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘ, ಅಲ್ಪಸಂಖ್ಯಾತರ ಉಪನ್ಯಾಸಕರ ಸಂಘದಿಂದ ಪ್ರತಿಭಟನೆ ಮಾಡಲಾಗಿದೆ. ಕಳೆದ 13 ವರ್ಷಗಳಿಂದ ನೇಮಕಾತಿ ನಿಯಮ ಪರಿಷ್ಕರಣೆಯಾಗದ ಕಾರಣ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ನಡೆ ಖಂಡಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ!

ಸಿ & ಆರ್ ನಿಯಮಗಳು ಇಲ್ಲದೇ ಯಾವುದೇ ವೃಂದಕ್ಕೆ ಮುಂಬಡ್ತಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳಿಗೆ ವಸತಿ ಶಾಲೆಯ ಪ್ರಾಂಶುಪಾಲರನ್ನು ವರ್ಗಾವಣೆ ಮಾಡಬಾರದು, ವರ್ಗಾವಣೆ ಮಾಡಿದ ವಸತಿ ಶಾಲೆಯ ಪ್ರಾಂಶುಪಾಲರನ್ನು ಹಿಂಪಡೆಯಬೇಕು. ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಶಿಕ್ಷಕರು ಹಾಗೂ ಪ್ರಾಂಶುಪಾಲರು ಒತ್ತಾಯಿಸಿದರು.

Exit mobile version