Site icon PowerTV

ಗಗನಯಾನ ಪರೀಕ್ಷಾರ್ಥ ಹಾರಾಟ ಯಶಸ್ವಿ!

ಬೆಂಗಳೂರು: ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆದಿದ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ.

3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ ಟಿವಿ-ಡಿ1 ರಾಕೆಟ್‌ ಉಡಾವಣೆ ಮಾಡಿದೆ. ಯಶಸ್ವಿಯಾಗಿ ಹಾರಾಟ ನಡೆಸಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ:ಕೊನೇ ಕ್ಷಣದಲ್ಲಿ ಗಗನಯಾನ ಪರೀಕ್ಷಾರ್ಥ ಉಡಾವಣೆ ಸ್ಥಗಿತಗೊಳಿಸಿದ ಇಸ್ರೋ!

ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದರೇ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.

Exit mobile version