Site icon PowerTV

ರಸ್ತೆ ಮಧ್ಯದಲ್ಲಿ ಮಚ್ಚಿನಿಂದ ಕೊಚ್ಚಿ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ

ಕೋಲಾರ : ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘನಘೋರ ಘಟನೆ ಕೋಲಾರದ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಅನಿಲ್ (40) ಕೊಲೆಯಾದ ಗ್ರಾಮ ಪಂಚಾಯಿತಿ ಸದಸ್ಯ. ಮೃತ ಅನಿಲ್ ಮಿಣಸಂದ್ರ ಗ್ರಾಮ ಪಂಚಾಯಿತಿ ಸದಸ್ಯ. ದುಷ್ಕರ್ಮಿಗಳು ರಸ್ತೆ ಮಧ್ಯದಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಅನಿಲ್ ಕಾಂಗ್ರೆಸ್ ಪಕ್ಷದ ಬೆಂಬಲಿಗನಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರಿಗಾಗಿ ಬಲೆ ಬೀಸಿದ್ದಾರೆ.

ಡೆತ್​ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರವಾರದ ಶಿರವಾಡ ನಿವಾಸಿ ಮಾರುತಿ ನಾಯ್ಕ(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಸಾವಿಗೆ ಪೊಲೀಸ್​ ಸಿಬ್ಬಂದಿ ದೇವರಾಜ, ಎಲಿಶಾ ಕುಟುಂಬಸ್ಥ ಬಸವರಾಜ, ಸುರೇಶ್​ ಮತ್ತು ನಾಗಮ್ಮ ಎಂಬುವವರು ಕಾರಣ ಎಂದು ಡೆತ್​ ನೋಟ್​ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Exit mobile version