Site icon PowerTV

7 ತಿಂಗಳು ಶಿರಸಿ-ಕುಮಟಾ ಹೆದ್ದಾರಿ ಬಂದ್‌!

ಕಾರವಾರ: ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನವೆಂಬರ್‌ 1ರಿಂದ ಮುಂದಿನ ಏಳು ತಿಂಗಳ ಕಾಲ ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಲಾಗಿದೆ.

ಸಹಾಯಕ ಆಯುಕ್ತ ದೇವರಾಜ.ಆರ್‌ ಅವರ ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ RNS ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಶಿರಸಿ-ದೇವಿಮನೆ ಘಟ್ಟದ ವ್ಯಾಪ್ತಿಯಲ್ಲಿನ ಸೇತುವೆ ಹಾಗೂ ದೇವಿಮನೆ ಘಟ್ಟದಲ್ಲಿ ರಸ್ತೆ ಕಾಮಗಾರಿ ನಡೆಸಬೇಕಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ನಟ ಡಾಲಿ ಧನಂಜಯ್!

ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಆಯುಕ್ತ ದೇವರಾಜ್‌, RNS ಕಂಪನಿ ಹಾಗೂ ಹೆದ್ದಾರಿ ಪ್ರಾಧಿಕಾರ ರಸ್ತೆ ಕಾಮಗಾರಿಗಾಗಿ ಹೆದ್ದಾರಿ ಬಂದ್‌ ಮಾಡುವಂತೆ ಕೋರಿದ್ದರು. ಅದರಂತೆ ಜಿಲ್ಲಾಧಿಕಾರಿಗಳು ಸಹ ಸೂಚನೆ ನೀಡಿದ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಾರ್ಗದ ಆಸುಪಾಸು ಇರುವ ಹಳ್ಳಿಗರಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಿದ್ದೇನೆ ಎಂದು ದೇವರಾಜ್​ ತಿಳಿಸಿದರು.

Exit mobile version