ಬೆಂಗಳೂರು : ಭಾರತ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ಗಳ ಸವಾಲಿನ ಟಾರ್ಗೆಟ್ ಕಲೆಹಾಕಿದೆ.
ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ನಿಗದಿತ 50 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 273 ರನ್ ಕಲೆಹಾಕಿತು.
ನ್ಯೂಜಿಲೆಂಡ್ ಪರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶಿಸಿದ ಮಿಚೆಲ್ 127 ಎಸೆತಗಳಲ್ಲಿ 130 ರನ್ ಚಚ್ಚಿದರು. ಇದರಲ್ಲಿ 9 ಬೌಂಡರಿ ಹಾಗೂ 5 ಬೊಂಬಾಟ್ ಸಿಕ್ಸರ್ ಸೇರಿದ್ದವು. ರಚಿನ್ ರವೀಂದ್ರ 75, ಫಿಲಿಪ್ಸ್ 23 ರನ್ ಗಳಿಸಿದರು.
5 ವಿಕೆಟ್ ಕಬಳಿಸಿದ ಶಮಿ
ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಕಬಳಿಸಿ ಮೀಂಚಿದರು. ಈ ಮೂಲಕ ವಿಶ್ವಕಪ್ನಲ್ಲಿ ತಾನಾಡಿದ ಮೊದಲ ಪಂದ್ಯದಲ್ಲೇ ತಂಡಕ್ಕೆ ಬೊಂಬಾಟ್ ಕಂಬ್ಯಾಕ್ ಮಾಡಿದರು. ಕುಲ್ದೀಪ್ ಯಾದವ್ 2, ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.
??????????? ?????!
TAKE. A. BOW ?#TeamIndia | #CWC23 | #MenInBlue | #INDvNZ pic.twitter.com/EbD3trrkku
— BCCI (@BCCI) October 22, 2023