Monday, August 25, 2025
Google search engine
HomeUncategorizedಬಸ್ಸಿನ ಕಿಟಕಿಯಲ್ಲಿ ಮಕ್ಕಳನ್ನ ಟವೆಲ್​ನಂತೆ ತುರುಕಿದ ಪೋಷಕರು

ಬಸ್ಸಿನ ಕಿಟಕಿಯಲ್ಲಿ ಮಕ್ಕಳನ್ನ ಟವೆಲ್​ನಂತೆ ತುರುಕಿದ ಪೋಷಕರು

ಚಿಕ್ಕಮಗಳೂರು : ಬಸ್ಸಿನ ಕಿಟಕಿಯಲ್ಲಿ ಮಕ್ಕಳನ್ನ ಪೋಷಕರು ಟವೆಲ್​ನಂತೆ ತುಂಬಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಬಸ್​​ನ ಕಿಟಕಿಯಿಂದ ಮಕ್ಕಳನ್ನು ಹತ್ತಿಸಿ ರಿಸರ್ವೇಶನ್ ಮಾಡಿದ್ದಾರೆ. ಒಂದೇ ಬಸ್​​ಗೆ 300ಕ್ಕೂ ಹೆಚ್ಚು ಜನ ಮುಗಿಬಿದ್ದಿದ್ದಾರೆ. ನವರಾತ್ರಿ ಹಿನ್ನೆಲೆ ಶೃಂಗೇರಿ ದೇವಾಲಯ ತುಂಬಿ ತುಳುಕುತ್ತಿದೆ. ಸಾವಿರಾರು ಭಕ್ತಾದಿಗಳು ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಿದ್ದಾರೆ. ಶಕ್ತಿ ಯೋಜನೆ ಎಫೆಕ್ಟ್​​​ನಿಂದ ಪ್ರವಾಸಿ ಕೇಂದ್ರ ಫುಲ್ ರಶ್ ಆಗಿದೆ. ಜನರನ್ನು ನಿಯಂತ್ರಿಸಲು ಸಿಬ್ಬಂದಿ ಹೈರಾಣಾಗಿದ್ದಾರೆ. ಪ್ರಯಾಣಿಕರನ್ನು ನಿಭಾಯಿಸಲು ಡ್ರೈವರ್, ಕಂಡಕ್ಟರ್ ಹರಸಾಹಸ ಪಡ್ತಿದ್ದಾರೆ.

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿನ ದೇವಾಲಯಕ್ಕೆ ಭಾರೀ ಪ್ರಮಾಣದಲ್ಲಿ ಭಕ್ತ ಸಾಗರ ಹರಿದು ಬಂದಿದೆ. ಶಕ್ತಿ ಯೋಜನೆ ಎಫೆಕ್ಟ್​​ನಿಂದ ದೇವಾಲಯಕ್ಕೆ ಮಹಿಳೆಯರ ದಂಡು ಹರಿದುಬಂದಿದೆ.

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿವೆ. ಹೊರನಾಡಿಗೆ ಬರುವ ಸರ್ಕಾರಿ ಬಸ್ಸುಗಳು ಫುಲ್ ರಶ್ ಆಗಿದೆ. ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ತಾಯಿ ಅನ್ನಪೂರ್ಣೇಶ್ವರಿ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments