Site icon PowerTV

ಬೆಳಗಾವಿಯಲ್ಲಿ 44 ಲಕ್ಷ ರೂ. ಮೌಲ್ಯದ ಎಣ್ಣೆ ಜಪ್ತಿ!

ಬೆಳಗಾವಿ: ತೆಲಂಗಾಣ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದೇ ತಡ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಕಸರತ್ತಿಗೆ ಇಳಿದಿವೆ.

ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮತದಾರರಿಗೆ ಹಂಚಲು ತರಲಾಗಿದ್ದ ಬ್ರ್ಯಾಂಡೆಡ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್​​!

ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಲಾರಿ ಸಮೇತ 44 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು ಚಾಲಕ ಪರಾರಿಯಾಗಿದ್ದಾನೆ.21 ವಿವಿಧ ದುಬಾರಿ ಬ್ರ್ಯಾಂಡ್​ನ 250 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ. 44 ಲಕ್ಷ ಮೌಲ್ಯದ ಗೋವಾ ಮದ್ಯ, 20 ಲಕ್ಷ ಮೌಲ್ಯದ ಲಾರಿ ಸೇರಿ ಒಟ್ಟು 63 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Exit mobile version