Site icon PowerTV

9 ಮಂದಿ ದರೋಡೆಕೋರರನ್ನು ಬಂಧಿಸಿದ ಪೊಲೀಸರು

ಬೀದರ್​ : ಅಂತರ್ ರಾಜ್ಯ ದರೋಡೆಕೋರರನ್ನು ಬೀದರ್​ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕಂಟೆನರ್ ಡ್ರೈವರ್​ಗೆ ಮತ್ತು ಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 9 ದರೋಡೆಕೋರರನ್ನು ಬಂಧಿಸಿದ್ದಾರೆ. 94 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಲಾರಿ ವಶಕ್ಕೆ ಪಡೆಯಲಾಗಿದೆ. 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಂ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ, ಒಂದು ಬೈಕ್ ಮತ್ತು 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ. ಸಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಾಂಜಾ ಪ್ರಕರಣ ಭೇದಿಸಿದ್ದಾರೆ.

Exit mobile version