Site icon PowerTV

ರಾಹುಲ್ ಗಾಂಧಿ ಆರೋಪಕ್ಕೆ ಭಾರತೀಯ ಸೇನೆಯಿಂದ ಪಟ್ಟಿ ರಿಲೀಸ್

ನವದೆಹಲಿ : ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅಗ್ನಿವೀರರಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಕ್ಕೆ ಭಾರತೀಯ ಸೇನೆ ಪ್ರತಿಕ್ರಿಯೆ ನೀಡಿದೆ.

ಅಗ್ನಿವೀರರಿಗೆ ಒಟ್ಟು 1.13 ಕೋಟಿ ರೂ. ಪರಿಹಾರ ಸಿಗುತ್ತದೆ ಎಂದು ತಿಳಿಸುವ ಮೂಲಕ ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು ಎಂದು ಸೇನೆ ಪರೋಕ್ಷವಾಗಿ ಹೇಳಿದೆ. ಎಡಿಜಿಪಿ ಇಂಡಿಯನ್‌ ಆರ್ಮಿ ಎಕ್ಸ್‌ನಲ್ಲಿ ಕರ್ತವ್ಯದಲ್ಲಿರುವ ಅಗ್ನಿವೀರರಿಗೆ ಸರ್ಕಾರದಿಂದ ಸಿಗುವ ಪರಿಹಾರದ ವಿವರಗಳನ್ನು ಪಟ್ಟಿ ಮಾಡಿ ತಿಳಿಸಿದೆ.

ಸಿಯಾಚಿನ್‌ನಲ್ಲಿ ಹುತಾತ್ಮರಾದ ಅಗ್ನಿವೀರ್ ಅಕ್ಷಯ್ ಲಕ್ಷ್ಮಣ್‌ಗೆ ಸಂತಾಪ ಸೂಚಿಸಿದ್ದ ರಾಹುಲ್ ಗಾಂಧಿ, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಆದರೆ, ಅವರಿಗೆ ಯಾವುದೇ ಗ್ರಾಚ್ಯೂಟಿ ಇಲ್ಲ. ಮಿಲಿಟರಿ ಸೌಲಭ್ಯಗಳಿಲ್ಲ, ಕುಟುಂಬಕ್ಕೆ ಪಿಂಚಣಿ ಇಲ್ಲ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಭಾರತದ ವೀರರನ್ನು ಅಪಮಾನಿಸುವ ಯೋಜನೆ ಎಂದು ಕಿಡಿಕಾರಿದರು.

Exit mobile version