Site icon PowerTV

ಆ್ಯಂಬುಲೆನ್ಸ್​ಗೆ ಲಾರಿ ಡಿಕ್ಕಿ, ರಕ್ತಸ್ರಾವದಿಂದ ರೋಗಿ ಸಾವು

ಬೆಂಗಳೂರು : ಚಿತ್ರದುರ್ಗದಿಂದ ರೋಗಿಯನ್ನು ಬೆಂಗಳೂರಿಗೆ ಕರೆತರುವಾಗ ಆ್ಯಂಬುಲೆನ್ಸ್ ಮತ್ತು ಲಾರಿ ನಡುವೆ ಅಪಘಾತವಾಗಿ ರೋಗಿ ಸಾವನಪ್ಪಿದ್ದಾನೆ. ಬೆಂಗಳೂರಿನ ನೆಲಮಂಗಲದ ಬೊಮ್ಮನಹಳ್ಳಿ ಬಳಿ ಘಟನೆ ನಡೆದಿದೆ.

ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದೆ.

ಅಪಘಾತದಲ್ಲಿ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Exit mobile version