Site icon PowerTV

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ : ಹೀಗಿದೆ ಪ್ಲೇಯಿಂಗ್ XI

ಬೆಂಗಳೂರು : ವಿಶ್ವಕಪ್-2023 ಟೂರ್ನಿಯ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಇಂದು ನಡೆಯಲಿರುವ 23ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳು ಸೆಣೆಸಾಟ ನಡೆಸಲಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಆಫ್ರಿಕಾ ಮೂರು ಜಯ, ಒಂದು ಸೋಲಿನೊಂದಿಗೆ 6 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಬಾಂಗ್ಲಾ ಮೂರು ಸೋಲುಂಡು ಆರನೇ ಸ್ಥಾನದಲ್ಲಿದೆ. ಆಫ್ರಿಕಾ ಇಂದಿನ ಪಂದ್ಯ ಗೆದ್ದರೆ ಟಾಪ್ 2ಗೆ ಏರಲಿದೆ.

ದಕ್ಷಿಣ ಆಫ್ರಿಕಾ ತಂಡ

ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿ.ಕೀ.), ರೀಝ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯಟ್ಝಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲಿಝಾಡ್ ವಿಲಿಯಮ್ಸ್

ಬಾಂಗ್ಲಾದೇಶ ತಂಡ

ಶಕೀಬ್ ಅಲ್ ಹಸನ್ (ನಾಯಕ), ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಝ್, ಮುಶ್ಫಿಕರ್ ರಹೀಮ್ (ವಿ.ಕೀ.), ಮಹಮ್ಮದುಲ್ಲ, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್

Exit mobile version