Site icon PowerTV

ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ! ನಾಲ್ವರ ಬಂಧನ

ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನ್‌ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್‌ಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು. ಈ ದಂಧೆಯಲ್ಲಿ ವೈದ್ಯರು ಸಹ ಇದ್ದು, 15 ರಿಂದ 20 ಸಾವಿರ ರೂಪಾಯಿ ಪಡೆದುಕೊಂಡು ಈ ದಂಧೆಗೆ ಸಾಥ್ ನೀಡುತ್ತಿದ್ದರು.

ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಇದ್ದರೆ ಅದು HDKನೇ: ಸಿಎಂ

ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ದಂಧೆ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದ ಇನ್‌ಸ್ಪೆಕ್ಟರ್‌ ಎಂ.ಪ್ರಶಾಂತ್ ಅವರು, ಕೂಡಲೇ ಪಿಎಸ್‌ಐ ಮಂಜುನಾಥ್‌, ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಮಂಜುನಾಥ್, ಎಎಸ್‌ಐಗಳಾದ ಗೋವಿಂದರಾಜು, ನಾಗಯ್ಯ ಒಳಗೊಂಡ ತಂಡ ರಚಿಸಿಕೊಂಡು ದಂಧೆಕೋರರ ಬೆನ್ನುಹತ್ತಿದ್ದಾಗ ಆರೋಪಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ.

Exit mobile version