Site icon PowerTV

ನಾನು ಧರಿಸಿರುವ ಹುಲಿ ಉಗುರು ಕೃತಕ: ನಿಖಿಲ್​ ಕುಮಾರಸ್ವಾಮಿ ಟ್ವೀಟ್​

ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎಂಬ ಆರೋಪ ವಿಚಾರ ಕೆಲವು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಹುಲಿ ಉಗುರು ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.
ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ
ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ.
ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು.

ಇದನ್ನೂ ಓದಿ: ಅ.28ರಂದು ಕರಾಳ ದಿನ ಆಚರಣೆಗೆ ಪ್ಯ್ಲಾನ್​​!: ವಾಟಾಳ್ ನಾಗರಾಜ್​

ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

Exit mobile version