Site icon PowerTV

ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ!

ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಳುವಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ!

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ  ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

Exit mobile version