Site icon PowerTV

ದಾವಣಗೆರೆಯಲ್ಲಿ ಮತ್ತೆ ಬಿಜೆಪಿ ಬಾವುಟ ಹಾರುತ್ತೆ : ಸಂಸದ ಸಿದ್ದೇಶ್ವರ್

ದಾವಣಗೆರೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿದ್ದೇಶ್ವರ್​ ಸೋಲಿಸಿ ಮನೆಗೆ ಕಳುಹಿಸುತ್ತೇವೆ ಎಂದಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಬಿಜೆಪಿ ಸಂಸದ ಜಿ.ಎಂ ಸಿದ್ದೇಶರ್ ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ನವರು 1999 ರಿಂದಲೂ ನನ್ನನ್ನು ಸೋಲಿಸುತ್ತಾ ಬಂದಿದ್ದಾರೆ. ಈಗಲೂ ಅದನ್ನೇ ಹೇಳುತ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನಗೆ ಯಾವುದೇ ಡೌಟು ಇಲ್ಲ.. ದಾವಣಗೆರೆಯಲ್ಲಿ ಮತ್ತೆ ಬಿಜೆಪಿ ಬಾವುಟ ಹಾರುತ್ತೆ. ನಮ್ಮ ತಂದೆಯ ಕಾಲದಿಂದಲೂ ಚುನಾವಣೆ ಮಾಡಿದ್ದೇನೆ. ಕಾರ್ಯಕರ್ತರು ಎಲ್ಲಾ ಕಡೇ ಸ್ಪಿರಿಟ್ ಆಗಿ ಕೆಲಸ ಮಾಡುತ್ತಾ ಇದ್ದಾರೆ. ನಾನು ಚುನಾವಣೆಗೆ ನಿಲ್ಲೋದು ಪಕ್ಕಾ, ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಬೇರೆಯವರಿಗೆ ಸಿಕ್ಕರೆ?

ವಿಧಾನಸಭೆಯಲ್ಲಿ ಸೋತಿದಕ್ಕೆ ಕಾರ್ಯಕರ್ತರು ವ್ಯಥೆಯಲ್ಲಿ ಇದ್ದಾರೆ. ಈ ಬಾರಿ ಬಿಜೆಪಿ ಗೆಲ್ಲಿಸಬೇಕು ಎಂದು ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಯಾರಿಗೆ ಟಿಕೆಟ್ ಕೊಡುತ್ತಾರೋ ನೋಡೊಣ. ಟಿಕೆಟ್ ಬೇರೆಯವರಿಗೆ ಸಿಕ್ಕರೆ ಕೆಲಸ ಮಾಡುತ್ತೇನೆ ಎಂದು ಹೈಕಮಾಂಡ್​ ಕಡೆ ಸಂಸದ ಸಿದ್ದೇಶ್ವರ್ ಬೊಟ್ಟು ಮಾಡಿದ್ದಾರೆ.

Exit mobile version