Site icon PowerTV

ಪುನೀತ್ ಕೆರೆಹಳ್ಳಿ ವಿರುದ್ಧ ತುಮಕೂರಿನಲ್ಲಿ FIR ದಾಖಲು

ತುಮಕೂರು : ಕಾಂಗ್ರೆಸ್ ಮುಖಂಡನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ತುಮಕೂರಿನಲ್ಲಿ FIR ದಾಖಲಾಗಿದೆ.

ತುಮಕೂರಿನ ಕಾಂಗ್ರೆಸ್ ವಕ್ತಾರ ಹಾಗೂ ವಕೀಲ ಸೂರ್ಯ ಮುಕುಂದರಾಜು ಹಾಗೂ ಅವರ ಸ್ನೇಹಿತರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಹಿನ್ನೆಲೆಯಲ್ಲಿ ತೇಜಸ್ ಗೌಡ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲಾಗಿದೆ.

ಪುನೀತ್ ಕೆರೆಹಳ್ಳಿ ಸೂರ್ಯ ಮುಕುಂದರಾಜು ಹಾಗೂ ಅವರ ಸಹೋದ್ಯೋಗಿಗಳನ್ನೂ ಫೇಸ್​​ಬುಕ್​​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಕೇರೆಹಳ್ಳಿ ಸಂಗಡಿಗರು ಸಹ ಆತನ ಪೋಸ್ಟಿಗೆ ಕಾಮೆಂಟ್​​​ಗಳನ್ನು ಹಾಕಿ ತೇಜೋವಧೆಗೆ ಮುಂದಾಗಿದ್ದು ಆ ಮೂಲಕ ವಕೀಲ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿ ದೂರು ಸಲ್ಲಿಸಿದ್ದರು. ಈ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version