Site icon PowerTV

ದುಬೈನಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವಕ್ಕೆ ಚಾಲನೆ!

ದುಬೈ: ಯುಎಇ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಸ್ವಾಮಿಗಳು ಉದ್ಘಾಟಿಸಿದರು.

ದುಬೈನಲ್ಲಿ ಶೇಕ್ ರಶೀದ್ ಆಡಿಟೋರಿಯಂನಲ್ಲಿ ನಡೆದ ಕೆಂಪೇಗೌಡರ ಉತ್ಸವ 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಶಾಸಕರಾದ  ಸಮೃದ್ಧಿ ಮಂಜುನಾಥ್,  ಸ್ವರೂಪ್ ಪ್ರಕಾಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳಾ ಪೇದೆಗಳಿಗೆ ಸೀಮಂತ ಕಾರ್ಯ!

ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

Exit mobile version