Site icon PowerTV

ಕುಮಾರಸ್ವಾಮಿ ಜಾತಿಗಣತಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು : ಸಿದ್ದರಾಮಯ್ಯ

ಬೆಂಗಳೂರು : ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛಾರ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಇದಕ್ಕಾಗಿ 165 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ನಾನು ಇದ್ದಾಗ ಬಂದಿರಲಿಲ್ಲ. ನಾನು ಹೋದ ಮೇಲೆ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಬಂದರೂ ಅವರು ವರದಿ ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ ಸಮಯದಲ್ಲಿ ವರದಿ ರೆಡಿ ಆಗಿದೆ. ಅಂದಿನ ಸಚಿವ ಪುಟ್ಟರಂಗಶೆಟ್ಟಿ ವರದಿ ತೆಗೆದುಕೊಳ್ಳೋಕೆ ರೆಡಿ ಇದ್ದರು. ಆದರೆ, ಕುಮಾರಸ್ವಾಮಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು. ಅದಕ್ಕೆ ಪುಟ್ಟರಂಗಶೆಟ್ಟಿ ವರದಿ ಪಡೆಯಲಿಲ್ಲ ಎಂದು ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ್ದಾರೆ.

Exit mobile version