Site icon PowerTV

ಸುಳ್ಳು, ತಪ್ಪು ಮಾಹಿತಿ ಹರಡುವುದು ಕಾಂಗ್ರೆಸಿಗರಿಗೆ ಚಟ : ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಬೆಂಗಳೂರು : ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕನ್ನಡದಲ್ಲೇ ಟ್ವಿಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ,ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ಕುಟುಕಿದ್ದಾರೆ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ ಎಂದು ಚಾಟಿ ಬೀಸಿದ್ದಾರೆ.

ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮ

ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು ಎಂದು ಗಜೇಂದ್ರ ಸಿಂಗ್ ಶೇಖಾವತ್ ಕಿಡಿಕಾರಿದ್ದಾರೆ.

Exit mobile version