Site icon PowerTV

ಕರಾವಳಿಯ ವಿವಿಧೆಡೆ IT ರೇಡ್​​​!

ದಕ್ಷಿಣ ಕನ್ನಡ/ಉಡುಪಿ:  ಕರಾವಳಿಯಲ್ಲಿ ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಶಾಕ್​ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಏಕಕಾಲದಲ್ಲಿ ಹಲವು ಜ್ಯುವೆಲ್ಲರಿ ಶಾಪ್​​ಗಳ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ ನಗರ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಮತ್ತಿತರ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಇಂದಿರಾಗಾಂಧಿ ರೀತಿ ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ: ಸಿಎಂ 

ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿ ಮೇಲೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್​ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಗ್ಗೆಯಿಂದಲೂ ಐಟಿ ತಪಾಸಣೆ ನಡೆಸುತ್ತಿದೆ. ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

Exit mobile version