Site icon PowerTV

ದೊಡ್ಡಬಳ್ಳಾಪುರದಲ್ಲಿ ಚಿರತೆ ದಾಳಿಗೆ ಹಸು ಸಾವು : ಆತಂಕದಲ್ಲಿ ಸ್ಥಳೀಯರು!

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಚಿರತೆಗಳ ಹಾವಳಿ ಮತ್ತೆ ಮುಂದುವರೆದಿದ್ದು ಚಿರತೆಯೊಂದು ಹಸುವಿನ ಮೇಲೆ ದಾಳಿಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ತಾಲೂಕಿನ ಚನ್ನಾಪುರ ಗ್ರಾಮದ ರೈತ ವೆಂಕಟೇಶ್​ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸೋಮವಾರ ರಾತ್ರಿ ತಮ್ಮ ತೋಟದ ಮನೆಯಲ್ಲಿ ಕಟ್ಟಿಹಾಕಿದ್ದಾಗ ಚಿರತೆ ದಾಳಿ ಮಾಡಿ ತಿಂದು ಹಾಕಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದ್ದು ಮನೆಯಿಂದ ಹೊರಗೆ ಬರಲು ಎದುರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ತಿಂಗಳುಗಳಿಂದ ಇಲ್ಲಿ ಚಿರತೆ ಹಾವಳಿ ಮಿತಿಮೀರಿದ್ದರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಹಳೆ ದ್ವೇಷ: ಸಿನಿಮೀಯ ಸ್ಟೈಲ್​ನಲ್ಲಿ ಕಾರು ಹತ್ತಿಸಿ ಮರ್ಡರ್​​!

ದೊಡ್ಡಬಳ್ಳಾಪುರ ಗ್ರಾಮಾಂತರದ ಚನ್ನಾಪುರದಲ್ಲಿ ನಡೆದ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ.

Exit mobile version