Site icon PowerTV

68ನೇ ಕನ್ನಡ ರಾಜ್ಯೋತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “68ನೇ ಕನ್ನಡ ರಾಜ್ಯೋತ್ಸವ” ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.

ಇದನ್ನೂ ಓದಿ: ಇಂದಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್: ಸಿಎಂ ಘೋಷಣೆ

ಈ ವೇಳೆ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ.ಕೆ.ಎನ್,ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ .ಹೆಚ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Exit mobile version