Site icon PowerTV

ಮುಂಬೈ ಹಾಗೂ ದೆಹಲಿ ಕ್ರೀಡಾಂಗಣದಲ್ಲಿ ಪಟಾಕಿ ಸಿಡಿಸುವಂತಿಲ್ಲ

ಬೆಂಗಳೂರು : ಮುಂಬೈನ ವಾಂಖೆಡೆ ಹಾಗೂ ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಾಳೆ ಮತ್ತು ಸೋಮವಾರ ನಡೆಯಲಿರುವ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ (BCCI) ನಿಷೇಧಿಸಿದೆ.

ಬಾಂಬೆ ಹೈಕೋರ್ಟ್ ಮುಂಬೈನ ವಾಯು ಗುಣಮಟ್ಟವನ್ನು ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದ ಬಳಿಕ BCCI ಈ ನಿರ್ಧಾರ ಪ್ರಕಟಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಈ ನಗರಗಳಲ್ಲಿ ನಡೆಯಲಿರುವ ಪಂದ್ಯಗಳ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೂರವುಳಿಯಲು BCCI ನಿರ್ಧರಿಸಿದೆ ಎಂದು ಕಾರ್ಯದರ್ಶಿ ಜಯ್‌ ಶಾ ಪ್ರತಿಕಾ ಹೇಳಿಕೆ ನೀಡಿದ್ದಾರೆ.

ಈ ವಿಷಯವನ್ನು ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ತಿಳಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಯಾವುದೇ ಪಟಾಕಿ ಪ್ರದರ್ಶನ ಇರುವುದಿಲ್ಲ. ಪಟಾಕಿ ಸಿಡಿಸುವುದರಿಂದ ಮಾಲಿನ್ಯದ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಂಡಳಿಯು ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ ಸೂಕ್ಷ್ಮತೆ ಹೊಂದಿದೆ ಎಂದು ಜಯ್‌ ಶಾ ತಿಳಿಸಿದ್ದಾರೆ.

Exit mobile version