Site icon PowerTV

ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಿ : ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು : ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಕಾಯಿಲೆಯಿಂದ ಬಳಲುತ್ತಿರುವ ರಾಜ್ಯದ ಪುಟ್ಟ ಕಂದನ ಪ್ರಾಣ ಉಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಜೀವನ್ಮರಣ ಹೋರಾಟದಲ್ಲಿದ್ದರುವ ಕಂದನಿಗೆ ಸಹಾಯ ಹಸ್ತ ಬೇಕಿದೆ ಎಂದು ಹೇಳಿದ್ದಾರೆ.

ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಅದರ ಬೆಲೆ 17.5 ಕೋಟಿ ರೂಪಾಯಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಬೇಕು. ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಅಂತ ಮನವಿ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Exit mobile version