Site icon PowerTV

ಹಿರೇಮಠದ ನಾಮಫಲಕಕ್ಕೆ ಸಗಣಿ ಬಳಿದು ಆಕ್ರೋಶ!

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲ ಗ್ರಾಮದಲ್ಲಿರುವ ಶ್ರೀ ಕರುಣೇಶ್ವರ ಹಿರೇಮಠ ಸಂಸ್ಥಾನದ
ನಾಮಫಲಕಕ್ಕೆ ಕಿಡಿಗೇಡಿಗಳು ಸೆಗಣಿ ಬಳಿದು ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ.

ನಾಮಫಲಕದಲ್ಲಿದ್ದ ಕರುಣೇಶ್ವರ ಹಿರೇಮಠದ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಭಾವಚಿತ್ರಕ್ಕೂ ಸಗಣಿ ಎರಚಿದ್ದಾರೆ. ಸಿದ್ದಲಿಂಗ ಸ್ವಾಮೀಜಿ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷರಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯನಿಗೆ ಧಮ್ಕಿ: ದೂರು ದಾಖಲು!

ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ SP ಅಡ್ಡೂರು ಶ್ರೀನಿವಾಸುಲು ಭೇಟಿ
ನೀಡಿ ಪರಿಶೀಲನೆ ನಡೆಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version