Site icon PowerTV

ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ!

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ನೀಡಲಿರೋ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆಯಲಿದೆ.

ಹಾಸನಾಂಬ ದರ್ಶನಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಂಡಿದ್ದು ಹಾಸನ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಗರದ ತುಂಬೆಲ್ಲಾ ಅದ್ದೂರಿಯಾಗಿ ವಿದ್ಯುತ್‌ ದೀಪಾಲಂಕಾರವನ್ನ ಮಾಡಲಾಗಿದೆ. ಇನ್ನು ಸಾರ್ವಜನಿಕರಿಗೆ ಇಂದು ಹಾಸನಾಂಬ ದೇವಾಲಯಕ್ಕೆ ಪ್ರವೇಶ ಇರೋದಿಲ್ಲ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾಗೆ 190 ರನ್​ಗಳ ಭರ್ಜರಿ ಜಯ : ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಹರಿಣಗಳು

ನಾಳೆಯಿಂದ ಸಾರ್ವಜನಿಕರಿಗೆ ದೇವಿಯ ದರ್ಶನ ಪಡೆಯೋದಕ್ಕೆ ಅವಕಾಶ ಕಲ್ಪಿಸಲಾಗುತ್ತೆ. ಇಂದು ಹಾಸನಾಂಬ ದೇವಾಲಯದ ಬಾಗಿಲು ತೆರೆಯುವುದರಿಂದ ಪೊಲೀಸ್ ಬಿಗಿ ಬಂದೋಬಸ್ತ್‌ ಕೂಡ ಏರ್ಪಡಿಸಲಾಗಿದೆ.

Exit mobile version