Site icon PowerTV

ಸಿದ್ದರಾಮಯ್ಯ ಕುರ್ಚಿ ಮೇಲೆ ಕೂತರೆ 5 ವರ್ಷ ಗ್ಯಾರಂಟಿ : ಜಿ.ಟಿ ದೇವೇಗೌಡ

ಮೈಸೂರು : ಸಿದ್ದರಾಮಯ್ಯನವರಿಗೆ ಒಂದು ನಂಬಿಕೆ ಇದೆ. ನಾನು ಒಮ್ಮೆ ಸಿಎಂ ಕುರ್ಚಿಯಲ್ಲಿ ಕೂತ ಮೇಲೆ 5 ವರ್ಷ ಗ್ಯಾರಂಟಿ ಅಂತ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷ ಆದ್ಮೇಲೆ ನಾನು ಸಿಎಂ ಆಗ್ತೀನಿ ಅಂತ ಡಿಕೆಶಿ ಹೇಳಿದ್ದಾರಾ? ಹಾಗಾಗಿ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ವಾಸ್ತವ ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಕುರ್ಚಿ ವಿಚಾರ ಬಿಟ್ಟು ಬರಗಾಲದತ್ತ ಗಮನ ನೀಡಲಿ. ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿದೆ. ಜನರು ತೀವ್ರ ಕಂಗಾಲಾಗಿದ್ದಾರೆ. ದಿನದಿಂದ ದಿ‌‌‌ನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಆದರೂ ಯಾವೊಬ್ಬ ಸಚಿವರು ಇತ್ತ ಗಮನ ಹರಿಸುತ್ತಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ‌. ಬರ ಪರಿಹಾರಕ್ಕಾಗಿ ಸಭೆ ನಡೆಸುತ್ತಿಲ್ಲ. ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಿ.ಟಿ ದೇವೇಗೌಡ ಮೈಸೂರಿನಲ್ಲಿ ಹೇಳಿದರು.

Exit mobile version