Site icon PowerTV

ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನಟಿ ಕಂಗನಾ ರಣಾವತ್

ಬೆಂಗಳೂರು : ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶ ಮಾಡುವ ಸುಳಿವು ನೀಡಿದ್ದಾರೆ. ಶ್ರೀ ಕೃಷ್ಣ ಆಶೀರ್ವಾದ ಮಾಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ದ್ವಾರಕಾದಲ್ಲಿರುವ ಶ್ರೀ ಕೃಷ್ಣನ ದ್ವಾರಕದೀಶ್ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಿರಾ ಎಂದು ಸುದ್ದಿಗಾರರು ಪ್ರಶ್ನಿಸಿದ್ದಕ್ಕೆ  ಉತ್ತರಿಸಿದ ಕಂಗನಾ ರಣಾವತ್ ಅವರು, ಶ್ರೀ ಕೃಷ್ಣ ಆಶೀರ್ವದಿಸಿದರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಮ ಮಂದಿರ ನಿರ್ಮಾಣ ಸಾಧ್ಯವಾಗಿಸಿದ್ದಕ್ಕೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಅವರು ಪ್ರಶಂಸಿಸಿದರು. ಬಿಜೆಪಿ ಸರ್ಕಾರದ ಪ್ರಯತ್ನದಿಂದಾಗಿ 600 ವರ್ಷಗಳ ಹೋರಾಟದ ಬಳಿಕ, ನಾವು ಭಾರತೀ ಯರು ಈ ದಿನವನ್ನು ನೋಡುತ್ತಿದ್ದೇವೆ. ಅಲ್ಲಿ ನಾವು ಭವ್ಯವಾದ ದೇವಸ್ಥಾನವನ್ನು ನಿರ್ಮಾಣ ಮಾಡುತ್ತಿದ್ದೇವೆ. ಸನಾತನ ಧರ್ಮದ ಧ್ವಜ ಜಗತ್ತಿನೆಲ್ಲೆಡೆ ಹಾರಿಸಬೇಕು ಎಂದು ರಣಾವತ್ ಹೇಳಿದ್ದಾರೆ.

Exit mobile version