Site icon PowerTV

ರಾಜಕೀಯ ನಿವೃತ್ತಿ ಸುಳಿವು ನೀಡಿದ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ

ಮಂಗಳೂರು : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚುನಾವಣೆ ಸ್ಪರ್ಧೆ ಹಾಗೂ ಪದವಿಯಲ್ಲಿ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಿ ಆಸಕ್ತಿ ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ಯಾರು ನಿಂತರೂ ಸೋಲಾಗಲ್ಲ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. ಇತ್ತೀಚೆಗೆ ಡಿ.ವಿ.ಸದಾನಂದ ಗೌಡ ಅವರು ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ಅವರು ದೆಹಲಿಗೆ ತೆರಳಿದ್ದಾಗ ಕೇಂದ್ರ ನಾಯಕರು ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಸೂಚಿಸಿದ್ರಾ? ಹೀಗಾಗಿಯೇ, ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

Exit mobile version