Site icon PowerTV

ಫಂಡ್ಸ್ ಹುಟ್ಸೋಕೆ ಆಗಲ್ಲ, ದುಡ್ಡು ಎಲ್ಲಿಂದ ತರ್ತೀರಾ? : ಸಂಸದೆ ಸುಮಲತಾ

ಮಂಡ್ಯ : ಅಭಿವೃದ್ಧಿ ಕೆಲಸಗಳಿಗೆ ದುಡ್ಡು ಎಲ್ಲಿಂದ ತರ್ತೀರಾ? ಫಂಡ್ಸ್ ಹುಟ್ಸೋಕೆ ಆಗಲ್ಲ. ಇರೋದರಲ್ಲೇ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್​ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನೀವು ಫ್ರೀ ಯೋಜನೆ ಕೊಡುತ್ತಿರವುದು ಜನರಿಗೆ ತೊಂದರೆ ಆಗುತ್ತದೆ. ಈಗ ಜನರಿಗೂ ಇದು ಗೊತ್ತಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕೂಡ ಗ್ಯಾರಂಟಿ‌ಗಳ ಚಾಲೆಂಜ್ ಫೇಸ್ ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಹಾಗೂ ನೀರಿನ ಸಮಸ್ಯೆ ಇದೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫ್ರೀ ಗ್ಯಾರಂಟಿ ಕೊಟ್ಟರೆ ಅಭಿವೃದ್ಧಿ ಕೆಲಸ ಆಗಲ್ಲ ಎಂದು ಮೊದಲೇ ಹೇಳಿದ್ವಿ. ಚುನಾವಣೆ ಗೆಲ್ಲುವ ಉದ್ದೇಶದಿಂದ ಬರೀ ಫ್ರೀ ಫ್ರೀ ಎಂದು ಕೊಟ್ಟರೆ ತೊಂದರೆ ಆಗುತ್ತದೆ ಎಂದು ಚಾಟಿ ಬೀಸಿದರು.

ನಾನು ಕಮೆಂಟ್ ಮಾಡಲ್ಲ

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಚರ್ಚೆ ವಿಚಾರ ಕುರಿತು ಪ್ರತಿಕ್ರಿಯಿಸಲು ಸಂಸದೆ ಸುಮಲತಾ ನಿರಾಕರಿಸಿದರು. ಅವರವರ ಪಕ್ಷದ ಆಂತರಿಕ ವಿಚಾರ. ನಾನು ಕಮೆಂಟ್ ಮಾಡಲ್ಲ ಎಂದು ಸುಮಲತಾ ಅಂಬರೀಶ್ ಜಾಣ್ಮೆಯ ಉತ್ತರ ನೀಡಿದರು.

Exit mobile version