Site icon PowerTV

ನಾನ್ಯಾಕೆ ಕ್ಷೇತ್ರ ಬಿಟ್ಟುಕೊಡಲಿ : ಸುಮಲತಾ

ಮಂಡ್ಯ: ಎಂಪಿ ಚುನಾವಣೆ ಸಂಬಂಧ ನಾನು ಯಾವುದೇ ಸಿದ್ದತೆ ಮಾಡಿಕೊಂಡಿಲ್ಲ. ಸರಿಯಾದ ಸಮಯ ಸಂದರ್ಭ ನೋಡಿ, ಎಲ್ಲವೂ ಅಂತಿಮವಾದಾಗ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಈಗ ನಾನು ಚುನಾವಣೆ ಸಂಬಂಧ ಮಾತಾಡಲ್ಲ. ಮಂಡ್ಯದಲ್ಲಿ ಚುನಾವಣೆಗೆ ನಿಲ್ಲಲ್ಲ, ನಿಲ್ಲುತ್ತೇನೆ ಎಂಬುದರ ಬಗೆಗೆ ಈಗಾಗಲೇ ಹಲವು ಬಾರಿ ಮಾತಾಡಿದ್ದೇನೆ. ಬಿಜೆಪಿ-ಜೆಡಿಎಎಸ್ ಮೈತ್ರಿಯಾದರೂ ಸೀಟು ಹಂಚಿಕೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗದೆ ನಾನು ಮಾತಾಡುವುದು ಸರಿಯಲ್ಲ.

ಇದನ್ನೂ ಓದಿ: ಸಚಿವ ಜಿ.ಪರಮೇಶ್ವರ್​​​ಗೆ ಸಿಎಂ ಆಗುವ ಅವಕಾಶವಿದೆ: ಸಚಿವ ಕೆ.ಎನ್​ ರಾಜಣ್ಣ!

ಮಂಡ್ಯದ ಜನ ನನ್ನ ಜೊತೆಗೆ ಇದ್ದಾರೆ. ಅಂಬರೀಶ್ ಅಭಿಮಾನಿಗಳು, ನನ್ನ ಫಾಲೋವರ್ಸ್​​ಗಳು ನನ್ನ ಜೊತೆ ಇದ್ದಾರೆ. ನಾನು ಯಾರ ಬಳಿಯೂ ಹೋಗಿ ಟಿಕೆಟ್ ಕೇಳಿಲ್ಲ. ಈಗಲೂ ಅಷ್ಟೇ ಯಾರನ್ನೂ ಕೇಳಲ್ಲ. ನಾನು ಎಂಪಿ ಸ್ಥಾನ ಇಲ್ಲದೇ ಇರುವಾಗಲೇ ಪಕ್ಷಗಳ ಆಫರ್ ನಾನು ಸ್ವೀಕರಿಸಿಲ್ಲ. ಸದ್ಯ ಎಂಪಿ ಆಗಿದ್ದೀನಿ. ನಾನ್ಯಾನೆ ಕ್ಷೇತ್ರ ಬಿಟ್ಟುಕೊಡಲಿ? ರಾಜಕಾರಣಕ್ಕಾಗಿ ಇಲ್ಲಿಗೆ ಬಂದಿಲ್ಲ. ಮಂಡ್ಯದ ಜನರಿಗಾಗಿ ಇಲ್ಲಿಗೆ ಬಂದಿರುವುದು ಎಂದರು.

Exit mobile version