Site icon PowerTV

ಅಂಗಾಂಗ ದಾನಿಗಳ ಕುಟುಂಬಕ್ಕೆ ಸರ್ಕಾರಿ ಗೌರವ!

ಬೆಂಗಳೂರು: ಅಂಗಾಂಗ ದಾನಿಗಳ ಕುಟುಂಬವನ್ನು ಗೌರವಿಸಲು ಸರ್ಕಾರ ಚಿಂತನೆ ನಡೆಸಿದೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಅಂಗಾಗ ದಾನ ಮಾಡುವವರಿಗೆ ಸರ್ಕಾರಿ ಗೌರವ ನೀಡುವಂತೆ ತೀರ್ಮಾನಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಅನೇಕ ಕಡೆ ಮಳೆ ಸಾಧ್ಯತೆ!

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ‘ಅಂಗಾಂಗ ದಾನ’ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳನ್ನು ಮತ್ತು ಕುಟುಂಬದವನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ.

ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ.

ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಸರ್ಕಾರವು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ. ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಪೋಸ್ಟ್​​ ಹಂಚಿಕೊಂಡಿದ್ದಾರೆ.

Exit mobile version