ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ವಿಶ್ವಕಪ್ 2023ರ 35 ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ವಿಶ್ವಕಪ್ನಲ್ಲಿ ಸತತ ಗೆಲುವುಗಳ ಮೂಲಕ ಉತ್ತಮ ಆರಂಭ ಪಡೆದುಕೊಂಡಿದ್ದ ನ್ಯೂಜಿಲೆಂಡ್ ಸೋಲಿನ ಸುಳಿಗೆ ಸಿಲುಕಿದೆ. ಇತ್ತ ಪಾಕಿಸ್ತಾನ ತಂಡ ಕೂಡ 4 ಪಂದ್ಯಗಳಲ್ಲಿ ಸೋತು ಸೆಮಿಫೈನಲ್‌ನ ರೇಸ್‌ನಿಂದ ಹೊರಗುಳಿಯುವ ಆತಂಕದಲ್ಲಿದೆ.
ಇದನ್ನೂ ಓದಿ: ನೇಪಾಳದಲ್ಲಿ ಪ್ರಭಲ ಭೂಕಂಪನ: 6.4 ತೀವ್ರತೆ ದಾಖಲು!
ನ್ಯೂಜಿಲೆಂಡ್ ತಂಡ ಆಡಿರುವ 7 ಪಂದ್ಯಗಳಲ್ಲಿ 4 ರಲ್ಲಿ ಗೆದ್ದಿದ್ದರೆ, ಪಾಕಿಸ್ತಾನ ತಂಡ 7 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯದಂತ್ತಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಪಂದ್ಯ ಆರಂಭವಾಗಲಿದೆ.
ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಿವಿಸ್ ಮತ್ತು ಪಾಕ್ ನಡುವಿನ ಪಂದ್ಯಕ್ಕೆ ಮಳೆಯು ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
