Site icon PowerTV

ಬೆಂಗಳೂರು ಸೇರಿ ರಾಜ್ಯದ ಅನೇಕ ಕಡೆ ಮಳೆ ಸಾಧ್ಯತೆ!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ಹೆಚ್ಚು ತೇವಾಂಶದ ಪ್ರಮಾಣವಿರಲಿದ್ದು ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಅನ್ನಭಾಗ್ಯ ಯೋಜನೆ: ಅಕ್ಕಿ ಬದಲು ಇನ್ನಷ್ಟು ತಿಂಗಳು ಜನರ ಖಾತೆಗೆ ಹಣ!

ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದಿನಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ.

ಇನ್ನೂ, ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version