Sunday, August 24, 2025
Google search engine
HomeUncategorizedಕೇಂದ್ರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ನೀಡಿ : ನಳಿನ್ ಕುಮಾರ್ ಕಟೀಲ್

ಕೇಂದ್ರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ನೀಡಿ : ನಳಿನ್ ಕುಮಾರ್ ಕಟೀಲ್

ವಿಜಯಪುರ: ಕೇಂದ್ರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ನೀಡಿ ಎಂದು ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ಧಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಬರ ಅಧ್ಯಾಯನ ಆರಂಭವಾಗಿದ್ದು,ಇಂದು ನಳಿನ್​ ಕುಮಾರ್ ಕಟೀಲ್​ರವರು ತಂಡದ ಜೊತೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ರಾಜ್ಯದಾದ್ಯಂತ ಸಂಚರಿಸಿ ಬರ ಅಧ್ಯಯನ ಮಾಡಿದ ಬಳಿಕ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ, ಬಳಿಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರುತ್ತೇವೆ ಎಂದರು.

ಇದನ್ನೂ ಓದಿ: ಕೆ.ಎನ್.ರಾಜಣ್ಣ ವಿರುದ್ಧ ದೂರು ನೀಡಿದ ಕಾರ್ಯಕರ್ತರು

ರಾಜ್ಯ ಸರ್ಕಾರ ಸಮರ್ಪಕವಾಗಿ ವಿದ್ಯುತ್‌ ನೀಡಿದ್ದಿರೆ ರೈತರು ಬೆಳೆದ ತಮ್ಮ ಅಲ್ಪಸ್ವಲ್ಪ ಬೆಳೆ ರಕ್ಷಣೆ ಮಾಡಿಕೊಳ್ಳುತ್ತಿದ್ದರು. ಸಮರ್ಪಕವಾಗಿ ವಿದ್ಯುತ್ ನೀಡದ ಕಾರಣ ಪೂರ್ಣ ಪ್ರಮಾಣದಲ್ಲಿ ಕೃಷಿ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಉಳಿಸುವ ಪ್ರಯತ್ನವಷ್ಟೇ 

ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆದಿದೆಯೇ ಹೊರತು, ರೈತರ ಹಿತ ಕಾಪಾಡಾಲು ಯೋಚಿಸುತ್ತಿಲ್ಲ, ಸರ್ಕಾರದ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ ಎಂದರು.

2 ಬಾರಿ ಮುಖ್ಯಮಂತ್ರಿಯಾದರೂ ಆಡಳಿತ ನಡೆಸಲು ಬರುತ್ತಿಲ್ಲ

ಎರಡು ಬಾರಿ ಮುಖ್ಯಮಂತ್ರಿಯಾದರೂಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅತಿವೃಷ್ಠಿ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರಿಹಾರ ಹಣಕ್ಕೆ ಕಾಯದೇ, ಎನ್ ಡಿಆರ್ ಎಫ್ ಮಾರ್ಗಸೂಚಿ ಮೀರಿ ತಕ್ಷಣ ಸಂತ್ರಸ್ತ ರೈತರಿಗೆ ಪರಿಹಾರ ಕೊಟ್ಟಿದ್ದರು.

ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು

ಮಾನ್ಯ ಮುಖ್ಯಮುಂತ್ರಿ ಸಿದ್ದರಾಮಯ್ಯನವರು ಬರ ಸಮಸ್ಸೆಗೆ ತಕ್ಷಣವೇ ಪರಿಹಾರ ನೀಡಬೇಕು ಎಂದು  ಒತ್ತಾಯಿಸಿದರು.

ಕೇಂದ್ರದ ಹಣಕ್ಕಾಗಿಕಾಯಬೇಡಿ 

ರೈತರ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು

ರೈತರ ವಿಷಯದಲ್ಲಿ ರಾಜಕೀಯ ಮಾಡಬೇಡಿ 

ಸಿದ್ದರಾಮಯ್ಯನವರು ರಾಜಕೀಯ ಮಾಡುತ್ತಿದ್ಧಾರೆ ರಾಜ್ಯದ ರಕ್ಷಣೆ ಮಾಡುತ್ತಿಲ್ಲ ನೀವು ಆದಷ್ಟು ಬೇಗ ಇದರ ಬಗ್ಗೆ ಗಮನಕೊಂಡಬೇಕು ಎಂದು ಕಿಡಿಕಾರಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments