Site icon PowerTV

ನಾಳೆ MG ರಸ್ತೆ- ಬೈಯ್ಯಪ್ಪನಹಳ್ಳಿವರೆಗೆ ಕೆಲಕಾಲ ಮೆಟ್ರೋ ಸ್ಥಗಿತ!

ಬೆಂಗಳೂರು: ನಿರ್ವಹಣಾ ಕಾಮಗಾರಿ ಹಿನ್ನೆಲೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಇಂದಿರಾನಗರದವರೆಗೆ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.

ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಕಾಮಗಾರಿ ಪೂರ್ಣ ಬಳಿಕ ಮೆಟ್ರೋ ಸೇವೆ ಯಥಾಸ್ಥಿತಿ ಆರಂಭಗೊಳ್ಳುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ: ಅಕ್ಕಿ ಬದಲು ಇನ್ನಷ್ಟು ತಿಂಗಳು ಜನರ ಖಾತೆಗೆ ಹಣ!

ನವೆಂಬರ್​ 5 ರಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ನಡೆಯಲಿದೆ, ಈ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ. ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ.

Exit mobile version