Site icon PowerTV

ಪ್ರತಿಮಾ ಕೊಲೆ : ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ : ಮಾಜಿ ಸಚಿವ ಮುನಿರತ್ನ

ಬೆಂಗಳೂರು : ಗಣಿ-ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ತಮ್ಮ ಹೆಸರು ಥಳಕು ಹಾಕಿರೋದಕ್ಕೆ ಬಿಜೆಪಿ ಶಾಸಕ ಮುನಿರತ್ನ ಗರಂ ಆಗಿದ್ದಾರೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅವರು, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಕೇಸ್​ನಲ್ಲಿ ಮುನಿರತ್ನ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುನಿರತ್ನ ಅವರು, ಲೋಕಸಭಾ ಚುನಾವಣೆಗೂ ಮುನ್ನ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ದೂರಿದ್ದಾರೆ.

ನನ್ನ ನಿವಾಸದ ಮುಂದೆ ಸಂಭವಿಸುವ ಅಪಘಾತಗಳಿಗೆ ನಾನೇ ಹೊಣೆಯಾಗಿದ್ದೇನೆಯೇ ಎಂದು ಪ್ರಶ್ನಿಸಿದ್ದಾರೆ. ಪ್ರತಿಮಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ, ಅದರ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ತನಿಖೆ ಮುಗಿದ ನಂತರ, ರಾಜಕೀಯವಾಗಿ ನನ್ನನ್ನು ಮುಗಿಸಲು ಬಯಸುವವರಿಗೆ ಉತ್ತರ ಕೊಡುತ್ತೇನೆ ಎಂದು ಮುನಿರತ್ನ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಪ್ರತಿಮಾ ಕೊಲೆ ಪ್ರಕರಣ : ಮಾಜಿ ಕಾರು ಚಾಲಕನಿಂದಲೇ ಗಣಿ ಅಧಿಕಾರಿ ಕೊಲೆ

ಮುನಿರತ್ನ ಪಾತ್ರದ ಬಗ್ಗೆ ತನಿಖೆ

ಪ್ರತಿಮಾ ಕೊಲೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ವಕ್ತಾರ ಮತ್ತು ಕಾನೂನು ವಿಭಾಗದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ.

Exit mobile version