Site icon PowerTV

ಪ್ರಿಯತಮನ ಜೊತೆ ಲಿವಿಂಗ್ ಟುಗೆದರ್​​ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ

ಬೆಂಗಳೂರು: ಲಿವಿಂಗ್ ಇನ್ ಟುಗೆದರ್​ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಸೌಮಿನಿ ದಾಸ್ (20) ಹಾಗೂ ಕೇರಳದ ಅಭಿಲ್ ಅಬ್ರಹಾಂ (29) ಎಂದು ಮೃತರನ್ನು ಗುರುತಿಸಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಇಬ್ಬರೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

ಸೌಮಿನಿ ದಾಸ್​ಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದರು.ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈ ವೇಳೆ, ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಕೆಗೆ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಲ್ ಅಬ್ರಹಾಂನ ಪರಿಚಯವಾಗಿದೆ.

ಅನಂತರ ಇಬ್ಬರು ಒಟ್ಟಿಗೆ ಜೀವನ ನಡೆಸಲು ತೀರ್ಮಾನಿಸಿ, ದೊಡ್ಡಗುಬ್ಬಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು. ಭಾನುವಾರ ಸೌಮಿನಿ ದಾಸ್‌ಗೆ ತನ್ನ ಗಂಡನಿಂದ ಫೋನ್ ಬಂದಿದೆ. ಫೋನ್‌ನಲ್ಲೇ ಸೌಮಿನಿ ಹಾಗೂ ಗಂಡನ ನಡುವೆ ಜಗಳ ಆಗಿದ್ದು, ಕಿರುಚಾಟ, ಕೂಗಾಟ ನಡೆಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಉಸಿರಾಡುವುದು ಕಷ್ಟ: ಸಮ-ಬೆಸ ಯೋಜನೆ ಮತ್ತೆ ಜಾರಿ

ಇದರಿಂದ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದು, ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಸೌಮಿರಾ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ತೀವ್ರ ಗಾಯಗೊಂಡ ಅಭಿಲ್ ಅಬ್ರಾಹಂ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಸಹ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Exit mobile version