Site icon PowerTV

ಕಾಡಾನೆ ದಾಳಿ : ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ : ಸಿದ್ದರಾಮಯ್ಯ

ಬೆಂಗಳೂರು : ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಯಲ್ಲಿ ಇಂದು ಮೃತಪಟ್ಟಿರುವ ಕಾರ್ಮಿಕ ಮಹಿಳೆ ಮೀನಾ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೂಡಲೇ ಸಾವನ್ನಪ್ಪಿರುವ ಮಹಿಳೆ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೀನಾ ಎಂಬ ಮಹಿಳೆ ಮೃತಪಟ್ಟಿರುವುದು ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಕೂಡಲೇ ಮೃತರ ಕುಟುಂಬಕ್ಕೆ ರೂ.15 ಲಕ್ಷ ಪರಿಹಾರ ನೀಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಭೇಟಿ

ಆನೆಗಳನ್ನು ಕಾಡಿಗೆ ಓಡಿಸುವ ಪ್ರಕ್ರಿಯೆ ಆರಂಭಿಸುತ್ತೇವೆ. ಈ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Exit mobile version