Site icon PowerTV

ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತ ಕ್ರಿಕೆಟ್ ದಿಗ್ಗಜರು

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ, ಅಮೋಘ ಬ್ಯಾಟಿಂಗ್ ಲಯದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಗಳಿಸಿದ ವಿರಾಟ್, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದರು.

ಆದರೆ, ವಿರಾಟ್ ಕೊಹ್ಲಿ ಸ್ವಾರ್ಥಿಯಾಗಿದ್ದು, ವೈಯಕ್ತಿಕ ದಾಖಲೆಗಾಗಿ ಆಡಿದರು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಟೀಕೆ ಮಾಡಿದ್ದರು. ಇದಕ್ಕೆ ಕ್ರಿಕೆಟ್ ದಿಗ್ಗಜರಿಂದಲೇ ತೀವ್ರ ಟೀಕೆ ವ್ಯಕ್ತವಾಗಿವೆ.

ಇಂಗ್ಲೆಂಡ್​ನ ಮಾಜಿ ನಾಯಕ ಮೈಕಲ್ ವಾನ್, ಇದು ಅಸಂಬದ್ಧ ಎಂದು ಹಫೀಜ್‌ಗೆ ತಕ್ಕ ಉತ್ತರ ನೀಡಿದ್ದಾರೆ. ಅದ್ಭುತ ಕ್ರಿಕೆಟ್ ಆಡುವ ಮೂಲಕ ಭಾರತ, ಎಂಟು ತಂಡಗಳ ವಿರುದ್ಧ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ. ಜೊತೆಗೆ ಭಾರತದ ಮಾಜಿ ವೇಗದ ಬೌಲರ್, ಕರ್ನಾಟಕದ ವೆಂಕಟೇಶ್ ಪ್ರಸಾದ್ ಕೂಡ ತಿರುಗೇಟು ನೀಡಿದ್ದರು. ಹೌದು, ಕೊಹ್ಲಿ ಸ್ವಾರ್ಥಿಯೇ, ಕೋಟಿಗಟ್ಟಲೆ ಜನರ ಕನಸನ್ನು ನನಸು ಮಾಡುವ ಸ್ವಾರ್ಥಿ ಎಂದು ಹೇಳಿದರು.

Exit mobile version